
ಹಾಸನ:ಹಾಸನಾಂಬ ದೇವಿಯ ದರ್ಶನ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಅರಣ್ಯ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.ಮೃತರನ್ನು ಬಸವರಾಜು ಮತ್ತು ಅನುಶ್ರೀ (19) ಎಂದು ಗುರ್ತಿಸಲಾಗಿದೆ , ಇವರ ಜೊತೆಗೆ ಮತ್ತೊಬ್ಬ ಯುವತಿ ಛಾಯಾ (20) ಕೂಡ ಇದ್ದು, ತೀವ್ರ ಗಾಯಗೊಂಡಿದ್ದಾರೆ. ಮೂವರು ಒಂದೇ ಬೈಕ್‌ನಲ್ಲಿ ಬೆಂಗಳೂರಿನಿಂದ ಹಾಸನಾಂಬ ದರ್ಶನಕ್ಕೆ ಬಂದಿದ್ದರು., ವಾಪಸ್ ಹೋಗುತ್ತಿದ್ದ ವೇಳೆ ಚನ್ನರಾಯಪಟ್ಟಣ ಕಡೆಯಿಂದ ವೇಗವಾಗಿ ಬರುತ್ತಿದ್ದ ಇನ್ನೋವಾ ಕಾರು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಇವರ ಬೈಕ್‌ಗೆ ಗುದ್ದಿದೆ.ಡಿಕ್ಕಿ ರಭಸಕ್ಕೆ ಬೈಕ್ ಅರಣ್ಯಕ್ಕೆ ನುಗ್ಗಿದ್ದು, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.ಗಾಯಗೊಂಡ ಛಾಯಾ ಹಾಗೂ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್ ಅವರನ್ನು ತಕ್ಷಣ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಛಾಯಾ ಅವರ ಸ್ಥಿತಿ ಗಭೀರವಾಗಿತ್ತು.ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



Leave a Reply