Advertisement

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಹೆಚ್.ವೈ. ಮೇಟಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮೇಟಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಮೇಟಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ಮೇಟಿ ಅವರ ಆರೋಗ್ಯವನ್ನು ವಿಚಾರಿಸಿದ್ದರು.

Leave a Reply

Your email address will not be published. Required fields are marked *