
ಹಾಸನ: ಯಗಚಿ ಹೊಳೆ ಬಳಿ ಇರುವ ಉಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಇದ್ದ ಡಿವೈಡರ್ ನಲ್ಲಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ಅವರು* ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಭಾಗದಲ್ಲಿ ನವಕೀಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಮಾರು 30 ಹಳ್ಳಿಗಳ ಜನರು ಓಡಾಡಲು ಅನುಕೂಲವಾಗುತ್ತಿತ್ತು ಆದರೆ ಇದೀಗ ಡಿವೈಡರ್ ಬಂದ್ ಆಗಿರುವ ಕಾರಣ ಸುಮಾರು 3 ಕಿಲೋ ಮೀಟರ್ ಬಳಸಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಆದುದರಿಂದ ಇದನ್ನು ತೆರವು ಮಾಡಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರು, ಸಾರ್ವಜನಿಕರು, ಗ್ರಾಮಸ್ಥರುಗಳು ಉಪಸ್ಥಿತರಿದ್ದರು.


Leave a Reply