
ಹಾಸನ :ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಅಡಿಕೆರೆ ಹೊಸುರು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಿಗೆ ಆತಂಕವನ್ನುಂಟು ಮಾಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ,ಇದರಿಂದಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.ಪದೇ ಪದೇ ಗ್ರಾಮದಲ್ಲಿ ಕಾಣಿಸಿಕೊಂಡಿದ್ದರಿಂದ ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಎರಡು-ಮೂರು ದಿನಗಳಿಂದ ಚಿರತೆ ಪ್ರತ್ಯಕ್ಷವಾಗುತ್ತಿದ್ದ ಜಾಗದಲ್ಲೇ ಬೋನಿರಿಸಿದ್ದರಿಂದ ಕಳೆದ ರಾತ್ರಿ ಚಿರತೆ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಸ್ಥಳೀಯ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.


Leave a Reply