Advertisement

ಹಲಸಿನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ

ಹಾಸನ:  ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಸಿನಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ   ಶಾಸಕ ಸ್ವರೂಪ ಪ್ರಕಾಶ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು .

ಸುಮಾರು 20 ಲಕ್ಷ  ರೂಪಾಯಿಗಳ ತಾಲೂಕು ಪಂಚಾಯಿತಿ ಅನುದಾನದಲ್ಲಿ  ಅಂಗನವಾಡಿ ಕಟ್ಟಡ ನಿರ್ಮಾಣವಾಗುತ್ತಿದ್ದು ಅಭಿಮಾನಿಗಳು ಹಾಗೂ ಗ್ರಾಮಸ್ಥರು ಹಾಗೂ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ  ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ಅದ್ಭುತ ಪೂರ್ವಕವಾಗಿ ಸ್ವಾಗತಿಸಿ ಸನ್ಮಾನಿಸಿದ ಗೌರವಿಸಿದರು. ಅಂಗನವಾಡಿ ಕಟ್ಟಡ ಮಕ್ಕಳ ವಿದ್ಯಾಭ್ಯಾಸದ ಉದ್ದೇಶದಿಂದ ನಿರ್ಮಾಣವಾಗುತ್ತಿದ್ದು ಇದನ್ನು ಗುಣಮಟ್ಟದ ಕಾಮಗಾರಿ ಯೊಂದಿಗೆ ಸುಸಜ್ಜಿತವಾಗಿ ನಿರ್ಮಿಸಬೇಕೆಂದು ಸಂಬಂಧಿಸಿದ ಗುತ್ತಿಗೆದಾರರಿಗೆ ಸ್ವರೂಪ್ ಸೂಚನೆ ನೀಡಿದರು.

Leave a Reply

Your email address will not be published. Required fields are marked *