

ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ 11 ಸ್ಥಾನಗಳ ಪೈಕಿ 10 ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗಂಗಾಧರ, ನಟರಾಜು, ಹುಚ್ಚೆ ಗೌಡ, ಮಂಜುನಾಥ್, ಮಂಜು ಶೆಟ್ಟಿ ಹಾಗೂ ಮಹಿಳಾ
ಮಿಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪದ್ಮ, ಶಾಂತಮ್ಮ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಮಲ್ಲೇಶ್ , ಪ್ರವರ್ಗ – ಎ ಪರಮೇಶಪ್ಪ , ಪ್ರವರ್ಗ – ಬಿ ಯಿಂದ ಸ್ಪರ್ಧಸಿದ್ದ ಲಿಂಗರಾಜು ಅವರು ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದಾರೆ.
ನೂತನ ನಿರ್ದೇಶಕರಿಗೆ ಮಾಜಿ ಶಾಸಕ ಪ್ರೀತಂಗೌಡ ಅವರು ಹೂವಿನ ಹಾರ ಹಾಕುವ ಮುಲಕ ಅಭಿನಂದಿಸಿದರು.
ಬಳಿಕ ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ನಿಟ್ಟೂರು ಡೇರಿ ಚುನಾವಣೆಯಲ್ಲಿ 11 ಸ್ಥಾನಗಳ ಪೈಕಿ 10 ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಂಘಟಿತ ಶ್ರಮದಿಂದ ಹಾಸನ ತಾಲೂಕಿನಲ್ಲಿ ರಾಜಕೀಯ ಗಾಳಿ ಯಾವಕಡೆ ಬೀಸಿದೆ ಎಂಬುದನ್ನು ತೋರಿಸಿದ್ದೀರಿ. ಹಾಗಾಗಿ ಚುನಾವಣೆಯಲ್ಲಿ ಗೆದ್ದಿರುವ ಅಭ್ಯರ್ಥಿಗಳು ಹಾಗೂ ಗೆಲುವಿಗೆ ಶ್ರಮಿಸಿದ ಎಲ್ಲಾ ಹಿರಿಯ ಮುಖಂಡರಿಗು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಇಡೀ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ನಿಟ್ಟೂರು ಪಂಚಾಯಿತಿಯಲ್ಲಿ ಯಾವ ಪಕ್ಷ ಮೇಲುಗೈ ಸಾಧಿಸುತ್ತದೆಯೋ ಆ ಪಕ್ಷ ವಿಧಾನಸಭಾ ಚುನಾವಣೆಯಲ್ಲೂ ಗೆಲುವು ಸಾಧಿಸಲಿದೆ ಎಂಬ ವಾಡಿಕೆ ಹಿಂದಿನಿಂದಲು ಇದೆ. ಇದೇ ರೀತಿ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲು ಬಿಜೆಪಿಯನ್ನು ಬೇರು ಮಟ್ಟದಿಂದಲು ಬಲಪಡಿಸಬೇಕಿದೆ ಎಂದ ಅವರು, 2028 ರ ಚುನಾವಣೆಯಲ್ಲು ರಾಜ್ಯದ 13೦ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಹಿಡಿಯಬೇಕು ಎಂಬುದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಅಪೇಕ್ಷೆಯಿದೆ. ಇದಕ್ಕಾಗಿ ನಾವೆಲ್ಲೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿಟ್ಟೂರು ಡೇರಿ ನೂತನ ನಿರ್ದೇಶಕರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.


Leave a Reply