
ಕಾರ್ಯಕ್ರಮವನ್ನುದ್ದೇಶಿಸಿ ಐಎಸಿಟಿ ಜಿಲ್ಲಾ ಕರೆಸ್ಪೋಡೆಂಟ್ ಕುಮಾರ್ ಮಾತನಾಡಿ”ನಮ್ಮ ಸಂಸ್ಥೆಯು ಕೇವಲ ಕಂಪ್ಯೂಟರ್ ಶಿಕ್ಷಣಕ್ಕೆ ಸೀಮಿತವಾಗದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ವೇದಿಕೆ ಕಲ್ಪಿಸಲಾಗಿದೆ,ಕಳೆದ ಒಂದು ವಾರದಿಂದ ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಪ್ರಮುಖವಾಗಿ ಚೆಸ್ರಂಗೋಲಿ ಸ್ಪರ್ಧೆ,ವೇಗದ ಟೈಪಿಂಗ್ ಸ್ಪರ್ಧೆ ಸೇರಿದಂತೆ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.ಕೇವಲ ತರಗತಿಯ ಕಲಿಕೆಗೆ ಸೀಮಿತವಾಗದಂತೆ ಇಂತಹ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಬೋಧಕ ಸಿಬ್ಬಂದಿ, ನೂರಾರು ವಿದ್ಯಾರ್ಥಿಗಳು ಸೇರಿದ್ದಂತೆ ಇತರರು ಉಪಸ್ಥಿತರಿದ್ದರು. ವಿಜೇತ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಿ ಗೌರವಿಸಲಾಯಿತು.


Leave a Reply