
ಗ್ರಾಮದಲ್ಲಿ ಕ್ಯೂರಿಂಗ್ ಪ್ರಕ್ರಿಯೆ ಕೈಬಿಟ್ಟು ಕಟ್ಟಡ ನಿರ್ಮಾಣ ಕಾರ್ಯ ಮುಂದುವರಿಸುತ್ತಿರುವ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡು ಸುಮಾರು ಒಂದು ವಾರ ಕಳೆದಿದ್ದು, ನಿಯಮಾನುಸಾರವಾಗಿ ಕಟ್ಟಡ ನಿರ್ಮಾಣದ ನಂತರ ಕನಿಷ್ಠ 15 ದಿನಗಳ ಕಾಲ ಕ್ಯೂರಿಂಗ್ ನಡೆಸಿ, ಬಳಿಕ ಪ್ಲಾಸ್ಟರ್ ಕಾರ್ಯ ಕೈಗೊಳ್ಳಬೇಕಾಗಿತ್ತು. ಆದರೆ ಗುತ್ತಿಗೆದಾರರು ಈ ನಿಯಮಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕಾಮಗಾರಿಯನ್ನು ಮುಂದುವರಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಈ ಸಂಬಂಧ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ತೆರಳಿದ ಗ್ರಾಮಸ್ಥರು, ನಿಯಮಾನುಸಾರ ಕ್ಯೂರಿಂಗ್ ನಡೆಸದೆ ಕಾಮಗಾರಿ ಮಾಡಬಾರದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಗುತ್ತಿಗೆದಾರರು ಗ್ರಾಮಸ್ಥರ ಮಾತಿಗೆ ಸ್ಪಂದಿಸದೆ ಕಾಮಗಾರಿಯನ್ನು ಮುಂದುವರಿಸಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.ಕಟ್ಟಡದ ಗುಣಮಟ್ಟ ಹಾಗೂ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಈ ವಿಷಯಕ್ಕೆ ಸಂಬಂಧಿಸಿದಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


Leave a Reply