Advertisement

ಶ್ರೀ ಪುರದಮ್ಮ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 19 ಮತ್ತು 20 ರಂದು ನಡೆಯಲಿದೆ

ಇಂದು  ಹಾಸನ ವಿಧಾನಸಭಾ ಕ್ಷೇತ್ರದ ಶಕ್ತಿ ದೇವತೆ ಶ್ರೀ ಪುರದಮ್ಮ ದೇವಿಯ ದರ್ಶನ ಪಡೆದು ಮಾರ್ಚ್ 19 ಮತ್ತು 20 ರಂದು ನಡೆಯಲಿರುವ ಪುರದಮ್ಮ ದೇವಾಲಯದ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು  ದೇವಾಲಯದ ಆವರಣದಲ್ಲಿ ಕ್ಷೇತ್ರದ ಶಾಸಕರಾದ ಸ್ವರೂಪ್ ಪ್ರಕಾಶ್ ರವರು ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಪೂರ್ವಭಾವಿ ಸಭೆ ನಡೆಸಿದರು.

ತನ್ನ ಶಕ್ತಿಮೂಲಕವೇ ಹೆಸರುವಾಸಿಯಾಗಿರುವ ಪುರದಮ್ಮ ದೇವಾಲಯಕ್ಕೆ ಪ್ರತಿದಿನ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ ದೇವಾಲಯದ ಅಭಿವೃದ್ಧಿ ನಮ್ಮ ಜವಾಬ್ದಾರಿಯಾಗಿದೆ. ಆದುದರಿಂದ ದೇವಾಲಯದ ಅಭಿವೃದ್ಧಿ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚಿಸಿದರು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ E ಹುಂಡಿ ತೆರೆಯಲಾಯಿತು ಜೊತೆಗೆ ಜಾತ್ರಾ ಮಹೋತ್ಸವಕ್ಕೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳು ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನು ಒದಗಿಸಲಾಗಿದೆ ಇನ್ನು ಹೆಚ್ಚಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ  ದೇವಾಲಯವನ್ನು ಮೇಲ್ದರ್ಜೆಗೇರಿಸಲು ಯೋಜಿಸಲಾಗಿದೆ ಎಂದ ತಿಳಿಸಿದರು.
ಜೊತೆಯಲ್ಲಿ. ಆರಕ್ಷಕ ನಿರೀಕ್ಷಕ ಕುಮಾರ್ , ಕಂದಾಯ ಇಲಾಖೆ ಅಧಿಕಾರಿಗಳು , ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *